ಬೆಂಗಳೂರು:- ಇಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸೂಚನೆಯನ್ನು ಇದೆ. ಇನ್ನು ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.
0.5-1.5 ಮೀ ಎತ್ತರವನ್ನು ಹೊಂದಿರುವ ಹೆಚ್ಚಿನ ಅವಧಿಯ ಅಲೆಗಳ ಉಬ್ಬರವಿಳಿತದ ಪರಿಣಾಮದಿಂದಾಗಿ ಸಮುದ್ರ ತೀರದ ಸಮೀಪದಲ್ಲಿ ಪ್ರಕ್ಷುಬ್ಧವಾಗಿರುವ ಸಾಧ್ಯತೆ ಇದೆ. ಪ್ರಸ್ತುತ ವೇಗವು 10-30 ಸೆಕೆಂಡಿನ ನಡುವೆ ಬದಲಾಗುತ್ತದೆ. ಹೀಗಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ.
ಇನ್ನು ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಆವರಿಸಲಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 18 ಡಿ.ಸೆ ಇರುವ ಸಾಧ್ಯತೆ ಇದೆ.