ಗದಗ:- ಜಿಲ್ಲೆಯಲ್ಲಿ ಬೆಳ್ಳಂಬೆಳ್ಳಿಗೆ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಪುರಸಭೆಯಿಂದ ತೆರವು ಕಾರ್ಯಾಚರಣೆ ನಡೆದಿದ್ದು, ಪಟ್ಟಣದ ತಹಶಿಲ್ದಾರರ ಕಚೇರಿಯ ಮುಂಭಾಗದಲ್ಲಿನ ಗೂಡಂಗಡಿಗಳ ತೆರವು ಕಾರ್ಯ ನಡೆದಿದೆ.
ಪುರಸಭೆ ಅಧಿಕಾರಿಗಳು, ಜೆಸಿಬಿಯಿಂದ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲಕ್ಕೆ ಅವಕಾಶ ಕಲ್ಪಿಸಿದ್ದಾರೆ. ಈ ವೇಳೆ ವ್ಯಾಪಾರಸ್ಥರು ಹಾಗೂ ಪುರಸಭೆ ಅಧಿಕಾರಿಗಳ ಮಧ್ಯ ವಾಗ್ವಾದ ನಡೆದಿದೆ. ಇದೇ ವೇಳೆ ಅಧಿಕಾರಿಗಳ ವಿರುದ್ಧ ವ್ಯಾಪಾರಸ್ಥರು ಆಕ್ರೋಶ ಹೊರ ಹಾಕಿದ್ದಾರೆ.