ಅಯೋಧ್ಯೆ: ವನವಾಸದಲ್ಲಿ ಶ್ರೀರಾಮ ಮಾಂಸಹಾರ ಸೇವಿಸುತ್ತಿದ್ದ ಎಂಬ ವಿಚಾರ ಸಂಪೂರ್ಣ ಸತ್ಯಕ್ಕೆ ದೂರವಾದದ್ದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) ಹೇಳಿದ್ದಾರೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (Nationalist Congress Party) ನಾಯಕ ಜಿತೇಂದ್ರ ಅವ್ಹಾದ್ (Jitendra Awhad) ಅವರು ಭಗವಾನ್ ರಾಮನ ಕುರಿತು ನೀಡಿದ್ದ ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಜಿತೇಂದ್ರ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಆಚಾರ್ಯರು,
India’s richest person: ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಭಾರತದ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ
ಅವರ ಮಾತನಾಡುತ್ತಿರುವುದು ಸಂಪೂರ್ಣ ಸುಳ್ಳು, ಭಗವಾನ್ ರಾಮನು ವನವಾಸದ ಸಮಯದಲ್ಲಿ ಮಾಂಸಾಹಾರಿ ಆಹಾರವನ್ನು ಸೇವಿಸಿದ್ದಾನೆ ಎಂದು ನಮ್ಮ ಧರ್ಮಗ್ರಂಥಗಳಲ್ಲಿ ಎಲ್ಲಿಯೂ ಬರೆದಿಲ್ಲ. ಅವರು ಹಣ್ಣುಗಳನ್ನು ಸ್ವೀಕರಿಸುತ್ತಿದ್ದರು ಎಂದಿದ್ದಾರೆ. ನಮ್ಮ ದೇವರು ಯಾವಾಗಲೂ ಸಸ್ಯಾಹಾರಿ. ಅವರು ನಮ್ಮ ಭಗವಾನ್ ರಾಮನನ್ನು ಅವಮಾನಿಸಲು ಕೀಳುಮಟ್ಟದ ಮಾತನಾಡುತ್ತಿದ್ದಾರೆ ಎಂದು ಆಚಾರ್ಯರು ಹೇಳಿದ್ದಾರೆ.