ಬೆಂಗಳೂರು: ಬೆಂಗಳೂರಿನ ನಾಗಸಂದ್ರದ ಕೈಗಾರಿಕೋದ್ಯಮಿಯೊಬ್ಬರು ನಿರ್ಮಿಸಿರುವ ಬೃಹದಾಕಾರದ ಅಳಿಲು ಪುತ್ಥಳಿ ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯ ನವ ನಿರ್ಮಾಣದ ವೇದಿಕೆಯಲ್ಲಿ ಶಾಶ್ವತವಾಗಿ ವಿರಾಜಮಾನವಾಗಲಿದೆ.
ಬೆಂಗಳೂರಿನ ನಾಗಸಂದ್ರ ಮೆಟ್ರೋ ಬಳಿಯ ಪ್ರಸಿದ್ಧಿ ಇಂಜಿನಿಯರ್ಸ್ ಕಂಪೆನಿಯ ಮಾಲೀಕರಾದ ಸಿ ಪ್ರಕಾಶ್ ಅವರು ಎರಡೂವರೆ ಟನ್ ಕಾರ್ಟನ್ ಸ್ಟೀಲ್ ಬಳಸಿ, 15 ಅಡಿ ಎತ್ತರ ಹಾಗೂ 7.5 ಅಡಿ ಅಗಲ ವಿಸ್ತೀರ್ಣದಲ್ಲಿ ಶ್ರೀರಾಮನ ಸೇವೆ ಎಂದು ನಿರ್ಮಿಸಿರುವ ಬೃಹದಾಕಾರದ ಅಳಿಲು ಪುತ್ಥಳಿ ಅಯೋಧ್ಯೆಯ ರೈಲ್ವೆ ನಿಲ್ದಾಣ ಆವರಣದ ಮಧ್ಯ ಭಾಗದಲ್ಲಿ ಅನಾವರಣಗೊಳ್ಳಲಿದೆ.
India’s richest person: ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಭಾರತದ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ
ಬೃಹದಾಕಾರದ ಅಳಿಲು ಪುತ್ಥಳಿ ಹೊತ್ತ ಟ್ರಕ್ ರಸ್ತೆ ಮಾರ್ಗವಾಗಿ ಅಯೋಧ್ಯೆಯತ್ತ ತೆರಳಿತು.ಇದೇ 11 ನೇ ತಾರೀಖು ಅಯೋಧ್ಯೆಗೆ ತಲುಪಲಿದ್ದು, 12 ನೇ ತಾರೀಖು ಅಯೋಧ್ಯೆ ರೈಲ್ವೆ ನಿಲ್ದಾಣ ಆವರಣದಲ್ಲಿ ಅಳಿಲು ಪ್ರತಿಷ್ಠಾಪನೆಗೊಳ್ಳಲಿದೆ.