ಬೆಂಗಳೂರು: ಸಂಸದ ಪ್ರತಾಪ್ ಸಿಂಹ (Pratap Simha) ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಇಡೀ ವಿಕ್ರಂ ಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದ್ದೇ, ಅವರೇ ಶ್ರೀಮನ್ ಸಿದ್ದರಾಮಣ್ಣ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಟಾಂಗ್ಕೊಟ್ಟಿದ್ದಾರೆ.
ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ (Vikram Simha) ಅವರ ಪ್ರಕರಣಕ್ಕೆ ಸಂಬಂಧಿಸಿ ತಾವು ನೀಡಿದ್ದ ಹೇಳಿಕೆಯ ಬಗ್ಗೆ, ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದ ಸಚಿವರಿಬ್ಬರಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
India’s richest person: ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಭಾರತದ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ
ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಹಾಗೂ ಸಹಕಾರ ಸಚಿವ ಕೆ.ಎನ್ ರಾಜಣ್ಣ (KN Rajanna) ಅವರ ಹೇಳಿಕೆಗಳಿಗೆ ಪ್ರತ್ಯುತ್ತರ ನೀಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ‘ನೀರೋ’ ಎಂದು ಜರೆದಿದ್ದಾರೆ. ಅಲ್ಲದೇ, ದಾಖಲೆ ಇಟ್ಟುಕೊಂಡೇ ವಿಕ್ರಂ ಸಿಂಹ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಬೇಕಿದ್ದರೆ ದಾಖಲೆಗಳನ್ನು ನಾನೇ ತಂದುಕೊಡುತ್ತೇನೆ. ಆಮೇಲೆ ಕ್ರಮ ಜರುಗಿಸುವ ದಮ್ಮು, ತಾಕತ್ತು ಹಾಗೂ ಸತ್ಯದ ಪರ ನಿಲ್ಲುವ ಗಂಡಸ್ತನ ಇದೆಯಾ? ಎಂದು ಅವರು ಪ್ರಶ್ನಿಸಿದ್ದಾರೆ.