ಹುಬ್ಬಳ್ಳಿ: ಜ.22 ರಂದು ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರದ ಸಂಭ್ರಮವನ್ನು ತಾಳಲಾರದೆ ಹೊಟ್ಟೆ ಕಿಚ್ಚಿನಿಂದ ಕಾಂಗ್ರೆಸ್ನವರು ಹಿಂದೂಗಳು ಸಮಾರಂಭದಲ್ಲಿ ಭಾಗವಹಿಸಬಾರದೆಂಬ ಉದ್ದೇಶದಿಂದ ರಾಜ್ಯದಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ನೀತಿ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಒಂದು ಕೋಮಿನ ಮತಕ್ಕಾಗಿ ಈ ಮಟ್ಟಕ್ಕೆ ಇಳಿದಿದೆ. ಈಗಾಗಲೇ ಕರಸೇವಕನ ಬಂಧನ ಮಾಡುವ ಮೂಲಕ ಕಾಂಗ್ರೆಸ್ ಕೈ ಸುಟ್ಟುಕೊಂಡಿದೆ. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿ ಬಾಲಿಶ ಹೇಳಿಕೆ ಕೊಡುವುದು ಸರಿಯಲ್ಲ, ಅವರಿಗೆ ಶೋಭೆ ತರುವುದಿಲ್ಲ ಎಂದರು.
India’s richest person: ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಭಾರತದ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ
ಬಿಜೆಪಿ ಕರಸೇವಕನ ಬಂಧನವನ್ನು ರಾಜಕೀಯಕ್ಕೆ ಬಳಕೆ ಮಾಡುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಇದರಲ್ಲಿ ರಾಜಕೀಯ ಮಾಡಿಲ್ವಾ? ಶ್ರೀಕಾಂತ್ ಪೂಜಾರಿ ಅವರನ್ನು ಸರ್ಕಾರ ರಾಜ್ಯದ ಹಿತದೃಷ್ಟಿಯಿಂದ ಅರೆಸ್ಟ್ ಮಾಡಿದ್ದಾರಾ?
ಈಗಾಗಲೇ ಗಲಭೆ ವಿಚಾರದಲ್ಲಿ ಎ-1, ಎ-3, ಎ-5, ಎ-7 ಆರೋಪಿಗಳು ಬೇಲ್ ಪಡೆದಿದ್ದಾರೆ. ಅಲ್ಲದೇ ಎಫ್ಐಆರ್ ಕಳೆದು ಹೋಗಿದೆ. ಆದರೆ ಸಿದ್ದರಾಮಯ್ಯ ಯಾವ ಆಧಾರದ ಮೇಲೆ ಶ್ರೀಕಾಂತ್ ಪೂಜಾರಿ ಮೇಲೆ 16 ಕೇಸ್’ಗಳಿವೆ ಎಂದು ಹೇಳುತ್ತಾರೆ? ಅವರು ಅಧಿಕಾರಿಯಲ್ಲ, ರಾಜ್ಯದ ಮುಖ್ಯಮಂತ್ರಿಗಳ ಸ್ಥಾನದಲ್ಲಿದ್ದು ಬಾಲಿಶ ಹೇಳಿಕೆ ಕೊಡಬಾರದು ಎಂದರು.