ಮಹಾರಾಷ್ಟ್ರ:- ಅಕ್ರಮವಾಗಿ ನೆಲೆಸಿದ್ದ 23 ರಿಂದ 45 ವರ್ಷ ವಯಸ್ಸಿನ ಮೂವರು ಬಾಂಗ್ಲಾದೇಶ ಪ್ರಜೆಗಳನ್ನು ಅರೆಸ್ಟ್ ಮಾಡಲಾಗಿದೆ.
ಇಲ್ಲಿನ ವಸಾಯಿ ಪ್ರದೇಶದಲ್ಲಿ ವಾಸವಾಗಿದ್ದರು. ಈ ಮೂವರನ್ನು ವಿಚಾರಣೆಗೆ ಒಳಪಡಿಸಿದ್ದು ಯಾವುದೇ ದಾಖಲೆಗಳು ಪತ್ತೆಯಾಗಿಲ್ಲ ಎಂದು ವಸಾಯಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಸಿಎಎ ಕಾಯ್ದೆ ಕೇಂದ್ರ ಜಾರಿಗೆ ತರಲಿದೆ ಎಂದು ಹೇಳಿದ ಬಳಿಕ ಅಕ್ರಮ ಬಾಂಗ್ಲಾ ವಲಸಿಗರು ತಮ್ಮ ದೇಶಕ್ಕೆ ಹಿಂದಿರುಗುತ್ತಿರುವ ಸಂಖ್ಯೆ ಹೆಚ್ಚಳವಾಗಿತ್ತು. ಸಿಎಎ ಕಾಯ್ದೆಯನ್ನು ಜಾರಿಗೆ ತರಲು ಮುಂದಾದ ಕೇಂದ್ರದ ವಿರುದ್ಧ ವಿರೋಧ ಪಕ್ಷಗಳಿಂದ ಟೀಕೆ ವ್ಯಕ್ತವಾಗಿತ್ತು. ಆದರೆ ಈ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಅಮಿತ್ ಶಾ ಕೋವಿಡ್ ಸಮಯದಲ್ಲಿ ಹೇಳಿದ್ದರು.
ಪೌರತ್ವ ತಿದ್ದುಪಡಿ ಮಸೂದೆಗೆ ಮಮತಾ ಬ್ಯಾನರ್ಜಿ ಮತ್ತು ಎಡಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಮಸೂದೆ ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಮಮತಾ ಘೋಷಿಸಿದ್ದರು. ಬಾಂಗ್ಲಾದೇಶದ ಅಕ್ರಮ ವಲಸಿಗರು ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ಒಂದು ಭಾಗವಾಗಿದ್ದಾರೆ. ರಾಜ್ಯ ಸರ್ಕಾರ ಈ ಬಗ್ಗೆ ಮೌನವಾಗಿದೆ.
ಹೀಗಾಗಿ ಈ ಬಗ್ಗೆ ಚರ್ಚಿಸಲೇಬೇಕಾಗಿದೆ ಎಂದು ಮಮತಾ ಬ್ಯಾನರ್ಜಿ ಅಂದು ಒತ್ತಾಯಿಸಿದ್ದರು. ಮಮತಾ ಬ್ಯಾನರ್ಜಿ ಅವರು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಗಂಭೀರವಾಗಿ ಆರೋಪ ಮಾಡಿತ್ತು.
ಇದುವರೆವಿಗೂ ಅಕ್ರಮ ಬಾಂಗ್ಲಾ ಮತ್ತು ವಿದೇಶಿಯರ ಮೇಲೆ ಒಟ್ಟು 764 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ 53 ಪ್ರಕರಣಗಳು ದಾಖಲಾಗಿವೆ. ವಿದೇಶಿಯರುಗಳ ವಿರುದ್ಧವೂ 711 ಪ್ರಕರಣಗಳು ದಾಖಲಾಗಿದೆ. ಜೊತೆಗೆ ಒಟ್ಟು 135 ಜನ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಅಕ್ರಮ ವಲಸಿಗರಿಗೆ ನಕಲಿ ಆಧಾರ ಕಾರ್ಡ್ ಸೇರಿದಂತೆ ಇನ್ನಿತರೆ ದಾಖಲೆಗಳನ್ನು ಮಾಡಿ ಕೊಡುತ್ತಿರುವ ಎಂಟಕ್ಕೂ ಅಧಿಕ ಜನ ಮಧ್ಯವರ್ತಿ ಏಜೆಂಟ್ಗಳನ್ನು ಪತ್ತೆ ಮಾಡಿ ಹಲವಾರು ದಾಖಲೆ ಜಪ್ತಿ ಮಾಡಲಾಗಿದೆ ಗೃಹ ಸಚಿವರು ಹೇಳಿದ್ದಾರೆ.