ಬೆಂಗಳೂರು:– ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ವಿಜಯನಗರ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಕೊಡುಗ ಸೇರಿದಂತೆ ಈ ಭಾಗದಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಗಳು ಇವೆ. ಉತ್ತರ ಒಳನಾಡು ಜಿಲ್ಲೆಗಳ ಮುನ್ಸೂಚನೆ ಇದೇ ವೇಳೆ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಕೊಪ್ಪಳ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಲ್ಕು ದಿನ ಆಗಾಗ ತುಂತುರು ಮಳೆ ಬರಲಿದೆ. ಕೆಲವೊಮ್ಮೆ ಒಂದರೆ ಕಡೆ ಹಗುರ ಮಳೆಯ ದಾಖಲಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನಾ ವರದಿ ತಿಳಿಸಿದೆ.