ಗದಗ :- ಹುಟ್ಟುಹಬ್ಬದ ಅಂಗವಾಗಿ ಬ್ಯಾನರ್ ಕಟ್ಟಲು ಹೋಗಿದ್ದ ಮೂವರು ಯುವಕರು ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.
ಹರಿಜನ್ ಮುರಳಿ ನಡವಿನಮನಿ, ಮತ್ತು ನವೀನ್ ಗಾಜಿ ಮೃತರು. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಲಕ್ಷ್ಮೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಶ್ ಮೇಲಿನ ಅಭಿಮಾನದಿಂದ ಮಧ್ಯರಾತ್ರಿ ಬರ್ತ್ ಡೇ ಪ್ಲಾನ್ ಮಾಡಿಕೊಂಡಿದ್ದರು.
ಈ ವೇಳೆ ಯಶ್ ಫೋಟೋವುಳ್ಳ ಬೃಹತ್ ಬ್ಯಾನರ್ ನಿಲ್ಲಿಸುವಾಗ ವಿದ್ಯುತ್ ತಂತಿಗೆ ತಗುಲಿ ಅವಘಡ ಸಂಭವಿಸಿದೆ