ಜೂನ್ 1 ರಿಂದ ಚುಟುಕು ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ ಸಿಗಲಿದೆ. ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಆಡಬೇಕೆಂದು ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.
ಚುಟುಕು ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಅವರೇ ತಂಡವನ್ನು ಮುನ್ನಡೆಸಬೇಕು ಮತ್ತು ವಿರಾಟ್ ಕೊಹ್ಲಿ ಆಡಬೇಕು ಎಂದಿದ್ದಾರೆ. ವಿರಾಟ್ ಕೊಹ್ಲಿ ಅವರು ಇತ್ತೀಚೆಗೆ ಉತ್ತಮ ಫಾರ್ಮ್ ನಲ್ಲಿದ್ದು, 14 ತಿಂಗಳು ಚುಟುಕು ಸ್ವರೂಪದಿಂದ ದೂರ ಉಳಿದಿದ್ದರು ಯಾವುದೇ ಪರಿಣಾಮ ಬೀರುವುದಿಲ್ಲ. 2022ರ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್ ಗಳ ಸೋಲು ಕಂಡ ನಂತರ ಈ ಮಾದರಿ ಕ್ರಿಕೆಟ್ ನಿಂದ ದೂರ ಉಳಿದಿದ್ದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅಫಘಾನಿಸ್ತಾನ ವಿರುದ್ಧದ ಚುಟುಕು ಸರಣಿಯಿಂದ ಕಮ್ ಬ್ಯಾಕ್ ಮಾಡುತ್ತಿದ್ದಾರೆ ಎಂದು ಸುದ್ದಿಗಾರರ ಜೊತೆ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ತಿಳಿಸಿದ್ದಾರೆ.
ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಬೇಕು. ವಿರಾಟ್ ಕೊಹ್ಲಿ ಕೂಡ ಆಡಬೇಕು. ಕೊಹ್ಲಿ ಅತ್ಯದ್ಭುತ ಆಟಗಾರರಾಗಿದ್ದು, 14 ತಿಂಗಳಿನಿಂದ ಈ ಸ್ವರೂಪದ ಆಟದಿಂದ ದೂರ ಉಳಿದು ತಂಡಕ್ಕೆ ಮರಳಿದರೂ ಯಾವುದೇ ಪರಿಣಾಮ ಬೀರುವುದಿಲ್ಲ,” ಎಂದು ಮಾಜಿ ನಾಯಕ ಹೇಳಿದ್ದಾರೆ.