ಕಲಬುರಗಿ: ಕಲಬುರಗಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರೆದಿದ್ದು ಇದೀಗ 5 ವರ್ಷದ ಬಾಲಕನ ಮೇಲೆ ನಾಯಿಗಳು ಅಟ್ಯಾಕ್ ಮಾಡಿವೆ..ಬಿಸ್ಬಾ ನಗರದಲ್ಲಿ ಘಟನೆ ನಡೆದಿದ್ದು ರಶೀದ್ ಎಂಬಾತ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ..
ಹಾಲು ತರಲು ಅಂಗಡಿಗೆ ಹೋದಾಗ ನಾಯಿಗಳ ಹಿಂಡು ದಾಳಿ ಮಾಡಿದ್ದು, ನಾಯಿಗಳ ಹಾವಳಿಗೆ ಬ್ರೇಕ್ ಹಾಕದ ಪಾಲಿಕೆ ವಿರುದ್ದ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ..