ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಯೋಜನಾ ಸಭೆ ನಡೆಯಿತು. ನಗರದ ಹೋಟೆಲ್ ರಮಾಡದಲ್ಲಿ ಬಿಜೆಪಿ ಲೋಕಸಭಾ ಚುನಾವಣೆ ಯೋಜನಾ ಸಭೆ ನಡೆಸಲಾಯಿತು.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚರ್ಚೆ ನಡೆಸ್ತಿದ್ದೇವೆ ಸಂಘಟನೆ ಬಲ ಪಡಿಸಲು ಪ್ರಮುಖರನ್ನು ಸಭೆಗೆ ಕರೆದಿದ್ದೇವೆ ಅನೇಕ ಸಂಗತಿಗಳು ಚರ್ಚೆ ಆಗಲಿವೆ ಲೋಕಸಭೆ ಸಿದ್ಧತೆ ಸೇರಿದಂತೆ ಎಲ್ಲದರ ಬಗ್ಗೆ ಚರ್ಚೆ ಆಗಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ರಾಮಮಂದಿರ ವಿಚಾರದಲ್ಲಿ ಕೈ- ಕಮಲ ನಾಯಕರ ಧರ್ಮ ದಂಗಲ್: MLC ಬಿಕೆ ಹರಿಪ್ರಸಾದ್ ಹೊಸ ಬಾಂಬ್!
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ,
ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಮತು ಮುಖಂಡರು ಉಪಸ್ಥಿತರಿದ್ದರು.