ಬೆಂಗಳೂರು: ಚಲನಚಿತ್ರ ನಟ ಯಶ್ (Yash) ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಮೂವರು ಯುವಕರು ಮೃತರಾಗಿದ್ದು ಯುವಕರ ಮನೆಗೆ ತೆರಳಿಲಿರುವ ನಟ ಯಶ್. ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಲಿರುವ ರಾಕಿ ಭಾಯ್.
ಗದಗಿನ ಲಕ್ಷಮೇಶ್ವರದ (Laxmeshwar) ಸೂರಣಗಿ ಗ್ರಾಮದಲ್ಲಿ ದುರಂತ ನಡೆದಿದ್ದು. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮಧ್ಯರಾತ್ರಿ ವೇಳೆ, ಹತ್ತಾರು ಜನ ಯುವಕರು ಸೇರಿಕೊಂಡು ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಲು ಮುಂದಾಗಿದ್ದಾರೆ. ರಾತ್ರಿ ಸಮಯ ಆಗಿದ್ದರಿಂದ ವಿದ್ಯುತ್ ತಂತಿ ಯುವಕರ ಗಮನಕ್ಕೆ ಬಂದಿಲ್ಲ. ಇದರಿಂದ ಈ ದುರ್ಘಟನೆ ಸಂಭವಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಮನೆ ಮಾಡಿದೆ.
ಇನ್ನೂ . ಲಕ್ಷ್ಮೇಶ್ವರ ತಾಲೂಕು ಆಸ್ಪತ್ರೆಗೆ ಶಾಸಕ ಚಂದ್ರು ಲಮಾಣಿ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಮಧ್ಯರಾತ್ರಿ ವೇಳೆ, ಹತ್ತಾರು ಜನ ಯುವಕರು ಸೇರಿಕೊಂಡು ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಲು ಮುಂದಾಗಿದ್ದಾರೆ. ರಾತ್ರಿ ಸಮಯ ಆಗಿದ್ದರಿಂದ ವಿದ್ಯುತ್ ತಂತಿ ಯುವಕರ ಗಮನಕ್ಕೆ ಬಂದಿಲ್ಲ. ಇದರಿಂದ ಈ ದುರ್ಘಟನೆ ಸಂಭವಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಮನೆ ಮಾಡಿದೆ. ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.