ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಬಿ ಎಂ ಟಿ ಸಿ ಗೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ ಉತ್ತರಹಳ್ಳಿ ರಸ್ತೆಯ ಮಂತ್ರಿ ಆಲ್ಫೈನ್ ಅಪಾರ್ಟ್ಮೆಂಟ್ ಎಂಟ್ರಿ ಗೇಟ್ ಮುಂದೆ ನಡೆದಿದೆ.
ಮೈಸೂರು ರಸ್ತೆ ಕಡೆಯಿಂದ ಉತ್ತರಹಳ್ಳಿ ಕಡೆಗೆ ಬರುತ್ತಿದ್ದ ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ಪಲ್ಸರ್ ಬೈಕ್ ಗೆ ಡಿಕ್ಕಿ ಹೊಡೆದಿದೆ.
Breaking: ಬರ್ತ್ʼಡೇ ಕಟೌಟ್ ಕಟ್ಟುವಾಗ ದುರಂತ: ಮೃತರ ಮನೆಗೆ ಭೇಟಿ ನೀಡಲಿರುವ ನಟ ಯಶ್!
ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಬಿಎಂಟಿಸಿ ಬಸ್ 22 ವರ್ಷದ ತೇಜಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ
ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬಸ್ ಚಾಲಕನ್ನು ವಶಕ್ಕೆ ಪಡೆಯಲಾಗಿದೆ.