ಮೈಸೂರು: ಬಿ.ಕೆ ಹರಿಪ್ರಸಾದ್ ಅವ್ರನ್ನು ಒಳಗೆ ಹಾಕಬೇಕು. ಮಂಪರು ಪರೀಕ್ಷೆ ಮಾಡಬೇಕು. ಈ ನಿರ್ಧಾರವನ್ನು ಮುಖ್ಯಮಂತ್ರಿಗಳು ತಕ್ಷಣ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಗೋಧ್ರಾ ಮಾದರಿ ದುರಂತ ದೇಶದಲ್ಲಿ ಮತ್ತೊಮ್ಮೆ ದೇಶದಲ್ಲಿ ಘಟಿಸಬಹುದು ಎಂಬ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಅವರ ಹೇಳಿಕೆ ವಿಚಾರವಾಗಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸಚಿವರ ಹೇಳಿಕೆಗಳು, ಶಾಸಕರ ಹೇಳಿಕೆಗಳು ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ಆಡಳಿತ ಪಕ್ಷದಿಂದ ರಾಜ್ಯದಲ್ಲಿ ಅಶಾಂತಿ ಉಂಟಾಗಿದೆ ಅಂತ ಆರೋಪಿಸಿದರು. ಹಿಂದೂ ಕಾರ್ಯಕರ್ತರನ್ನ ಬೆದರಿಸುವ ಕೆಲಸವನ್ನ ಕಾಂಗ್ರೆಸ್ ಪಕ್ಷ ಮಾಡ್ತಿದೆ. ಮತ್ತೊಂದು ಕಡೆ ಅಲ್ಪಸಂಖ್ಯಾತರನ್ನ ಓಲೈಸುವ ಕೆಲಸ ಮಾಡ್ತಿದೆ.
ಇದಕ್ಕಿಂತ ಒಳ್ಳೆ ಸೇವಿಂಗ್ಸ್ ಮತ್ತೊಂದಿಲ್ಲ..! ದಿನಕ್ಕೆ 50 ರೂಪಾಯಿ ಉಳಿಸಿ 30 ಲಕ್ಷ ನಿಮ್ಮದಾಗಿಸಿಕೊಳ್ಳಿ.!
. ಹಿಂದೂ ಕಾರ್ಯಕರ್ತರನ್ನ ಬಂಧಿಸೋದು. ಯಾರೋ ಪೊಲೀಸ್ ಸ್ಟೇಷನ್ಗೆ ಬೆಂಕಿ ಇಟ್ಟವರನ್ನ ಅಮಾಯಕರು ಅನ್ನೋದು. ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ. ಇದನ್ನ ನಾವು ಖಂಡಿಸುತ್ತೇವೆ. ಬಿಜೆಪಿ ಸದಾ ಹಿಂದೂ ಪರ ನಿಲ್ಲುತ್ತದೆ. ಈ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಜನರೇ ಮುಂದಿನ ಲೋಕಸಭೆ ಎಲೆಕ್ಶನ್ ನಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.