ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ಯುವತಿಗೆ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು (Bengaluru) ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಜನವರಿ 1 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವಕನೋರ್ವ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ. ಮೆಟ್ರೋದಿಂದ ಇಳಿಯುತ್ತಿದ್ದಂತೆ ಯುವತಿ (Bengaluru Woman), ಯುವಕನಿಗೆ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾಳೆ.
Breaking: ಬರ್ತ್ʼಡೇ ಕಟೌಟ್ ಕಟ್ಟುವಾಗ ದುರಂತ: ಮೃತರ ಮನೆಗೆ ಭೇಟಿ ನೀಡಲಿರುವ ನಟ ಯಶ್!
ಯುವಕನನ್ನು ಮೆಟ್ರೋ ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದಾಳೆ. ಬಳಿಕ ನೀನು ಇಲ್ಲಿಂದ ಹೋಗೋಹಾಗಿಲ್ಲ, ನಿನಗೆ ಶಿಕ್ಷೆ ಆಗಲೇಬೇಕು, ಮಾತನಾಡದಿದ್ರೆ ನಮಗೆ ನ್ಯಾಯ ಸಿಗಲ್ಲ ಎಂದು ಪಟ್ಟು ಹಿಡಿದು ಕ್ರಮಕ್ಕೆ ಒತ್ತಾಯಿಸಿದ್ದಾಳೆ. ಬಳಿಕ ವಿಚಾರಣೆ ನಡೆಸಿ ಮೆಟ್ರೊ ಅಧಿಕಾರಿಗಳು ಯುವಕನನ್ನ ಉಪ್ಪಾರ ಪೇಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಯುವಕ ತಪ್ಪೊಪ್ಪಿಕೊಂಡ ಬಳಿಕ ಇನ್ನೊಮ್ಮೆ ಹೀಗೆ ಮಾಡದಂತೆ ಕ್ಷಮೆ ಕೇಳಿಸಿ ಕಳುಹಿಸಿದ್ದಾರೆ.
ಘಟನೆ ನಡೆದ ಒಂದು ವಾರದ ಬಳಿಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೃತ್ಯ ಎಸಗಿದ್ದ ಯುವಕ ಮೂಲತಃ ಉತ್ತರ ಭಾರತದ ನಿವಾಸಿ ಎಂದು ತಿಳಿದುಬಂದಿದೆ