ವಿಜಯಪುರ: ತನಗೆ ತಾನೇ ಪೂಜಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಇಂಡಿ ರಸ್ತೆಯಲ್ಲಿ ನಡೆದಿದೆ. ವ್ಯಕ್ತಿಯನ್ನು ಅಡಿವೆಪ್ಪ ಘಾಯಿ (43) ಎಂದು ಗುರುತಿಸಲಾಗಿದೆ. ಮಾನಸಿಕವಾಗಿ ಮನನೊಂದು ವ್ಯಕ್ತಿ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದಕ್ಕಿಂತ ಒಳ್ಳೆ ಸೇವಿಂಗ್ಸ್ ಮತ್ತೊಂದಿಲ್ಲ..! ದಿನಕ್ಕೆ 50 ರೂಪಾಯಿ ಉಳಿಸಿ 30 ಲಕ್ಷ ನಿಮ್ಮದಾಗಿಸಿಕೊಳ್ಳಿ.!
ಈ ವ್ಯಕ್ತಿ ಕಂಬಳಿಯಲ್ಲಿ ಕುಳಿತು ಪೂಜೆ ಮಾಡಿ, ಕುತ್ತಿಗೆಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಮಾಲೆ ಹಾಕಿಕೊಂಡು ಸೂಸೈಡ್ ಮಾಡಿಕೊಂಡಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಹಿರಿಯರ ಆಸ್ತಿಯಲ್ಲಿ 39 ಎಕರೆ ಜಮೀನು ಮಾರಿ ಮದ್ಯಸೇವನೆ ಮಾಡಿ ಹಾಳು ಮಾಡಿದ್ದೇನೆ ಎಂದು ಮಾನಸಿಕವಾಗಿ ಮನನೊಂದಿದ್ದನು ಎನ್ನಲಾಗಿದೆ. ಈ ಸಂಬಂಧ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.