ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದೇಣಿಗೆ ಕೊಟ್ಟಿದ್ದೇನೆ. ಇದು ನನ್ನ ವೈಯಕ್ತಿಕ ವಿಚಾರ. ಎಷ್ಟು ದೇಣಿಗೆ ನೀಡಿದ್ದೇನೆ ಎಂದು ಹೇಳಿಕೊಳ್ಳಬಾರದು ಎಂದರು.
ವಿದ್ಯುತ್ ಸ್ಪರ್ಶಿಸಿ ಯಶ್ ಅಭಿಮಾನಿಗಳ ದುರ್ಮರಣ: ಮೃತರ ಕುಟುಂಬಕ್ಕೆ ಪರಿಹಾರ ಸೂಚಿಸಿದ ಸಿಎಂ!
ಅಯೋಧ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಪ್ರತ್ಯೇಕ ದಿನ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದರೆ ಅದಕ್ಕೂ ಸಿದ್ಧ. ವಿಶೇಷ ಪೂಜೆ ಸಲ್ಲಿಸುತ್ತೇವೆ. ನಾವು ಹಿಂದುಗಳಲ್ವ? ನಮ್ಮ ಪಕ್ಷದಲ್ಲಿಯೂ ಹಿಂದುಗಳಿಲ್ಲವೇ? ಅದರಲ್ಲೇನು ತಪ್ಪಿದೆ ಎಂದಿದ್ದಾರೆ.