ಬೆಂಗಳೂರು:- ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ ಸತ್ಯವತಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಸತ್ಯವತಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ರಾಮಚಂದ್ರನ್ ಆರ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಜಿ. ಸತ್ಯವತಿ ಅವರನ್ನು ವರ್ಗಾವಣೆ ಮಾಡಲಾಗಿದ್ದರೂ ಹುದ್ದೆಯನ್ನು ತೋರಿಸಿಲ್ಲ. ಸದ್ಯ ರಾಮಚಂದ್ರನ್ ಆರ್. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತರು ಹುದ್ದೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಈ ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಬಿಎಂಟಿಸಿ ಎಂಡಿಯಾಗಿ ನೇಮಕ ಮಾಡಲಾಗಿದೆ.