ಬೆಂಗಳೂರು:– ಕರ್ನಾಟಕದ ಹಲವೆಡೆ ನಾಳೆ ಮಳೆ ಸಾಧ್ಯತೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ನಾಳೆ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ಕೋಲಾರ, ಚಿಕ್ಕಬಳ್ಳಾಪುರ, ವಿಜಯನಗರ, ಮಂಡ್ಯ ಜಿಲ್ಲೆಯಲ್ಲಿ ಇಂದು ಸಾಧಾರಣ ಮಳೆಯಾಗಿದ್ದು, ನಾಳೆಯೂ ಇದು ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ನಗರದ ಸುತ್ತಮುತ್ತ ಮೋಡ ಕವಿದ ವಾತಾವರಣ ಇದ್ದು, ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಾರೀ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ದಾಖಲಾಗಿದ್ದು, 6.3 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಹೇಳಿದ್ದಾರೆ. ಕಳೆದ ಬಾರಿ 6 ಮಿ.ಮೀ ಮಳೆಯಯಾಗಿತ್ತು. ಅರೆಬಿಕ್ ಸಮುದ್ರದಲ್ಲಿ ಸುಳಿಗಾಳಿ ಬೀಸಿದ ಪರಿಣಾಮ ಇಂದು ಮತ್ತೆ ನಾಳೆ ಹಗುರ ಮಳೆಯಾಗಲಿದೆ. ಈ ತಿಂಗಳು ವಾಡಿಕೆಗಿಂತ ಶೇಕಡ 70ರಷ್ಟು ಹೆಚ್ಚು ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ 7.3 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಸಾದ್ ಹೇಳಿದ್ದಾರೆ