ಬೆಂಗಳೂರು:- ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜರುಗಿದೆ.
ತೇಜಸ್(22) ಎಂಬಾತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತ ತೇಜಸ್ ಮಧ್ಯಾಹ್ನ ಸೋಮವಾರ 12:25ರ ಸುಮಾರಿಗೆ ಉತ್ತರಹಳ್ಳಿ ರಸ್ತೆಯಲ್ಲಿ ತನ್ನ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ. ಮಂತ್ರಿ ಆಲ್ಫೈನ್ ಅಪಾರ್ಟ್ ಮೆಂಟ್ ಬಳಿ ಸಾಗುತ್ತಿದ್ದ ವೇಳೆ ಮೈಸೂರು ರಸ್ತೆ ಉತ್ತರಹಳ್ಳಿ ಮಾರ್ಗದ ಬಸ್ ಅನ್ನು ಓವರ್ ಟೇಕ್ ಮಾಡಲು ಯತ್ನಿಸಿದಾಗ ಟಚ್ ಆಗಿ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಬಸ್ನ ಬಲ ಹಿಂಭಾಗದ ಚಕ್ರ ತೇಜಸ್ ಮೇಲೆ ಹರಿದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿರುವುದಾಗಿ ತಿಳಿಸಿದ್ದಾರೆ.