ಬೆಂಗಳೂರು:- ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾದರೆ, ಬೆಂಗಳೂರು, ಬೆಂ,ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಳಗಾವಿ, ಕಲಬುರಗಿ ಮತ್ತು ವಿಜಯಪುರದಲ್ಲಿ ತುಂತುರು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಜ.10ರವರೆಗೆ ರಾಜ್ಯಾದ್ಯಂತ ಮೋಡ ಕವಿದ ವಾತಾವರಣ ಇರಲಿದೆ. ನಂತರ, ಒಣಹವೆ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.