ಬೆಂಗಳೂರು:- ಅನ್ನಭಾಗ್ಯದ ಅಕ್ಕಿಯಲ್ಲಿ ರಾಜ್ಯ ಸರಕಾರದ ಕೊಡುಗೆ ಶೂನ್ಯ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಅನ್ನಭಾಗ್ಯ ಅಕ್ಕಿಯಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ತಯಾರಿಸಿದ್ದಾರೆಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದು, ಅನ್ನಭಾಗ್ಯದ ಅಕ್ಕಿಯಲ್ಲಿ ರಾಜ್ಯ ಸರಕಾರದ ಕೊಡುಗೆ ಶೂನ್ಯ ಎಂದು ತಿರುಗೇಟು ನೀಡಿದ್ದಾರೆ.
ಈ ಸಂಬಂಧ ಪಡಿತರ ರಶೀದಿಯನ್ನು ಸಾಮಾಜಿಕ ಜಾಲತಾಣ “ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಅನ್ನಭಾಗ್ಯದ ಅಕ್ಕಿಯಲ್ಲಿ ಶ್ರೀರಾಮನ ಮಂತ್ರಾಕ್ಷತೆ ನೀಡಲಾಗುತ್ತಿದೆ ಎಂದು ಸುಳ್ಳು ಹೇಳುತ್ತೀರಲ್ಲ, ನಿಮ್ಮನ್ನು ಆ ಶ್ರೀರಾಮ ಮೆಚ್ಚುವನೇ? ತಮ್ಮ ಗ್ಯಾರಂಟಿಗಳ ಬಂಡವಾಳ ಬಯಲಾಗಿದೆ ಎಂದು ಹೇಳಿದ್ದಾರೆ.