ದಕ್ಷಿಣ ಆಫ್ರಿಕಾ ತಂಡದ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಹೆನ್ರಿಚ್ ಕ್ಲಾಸೆನ್ ಟೆಸ್ಟ್ ಕ್ರಿಕೆಟ್ ವೃತ್ತಿಬದುಕಿಗೆ ಹಠಾತ್ ನಿವೃತ್ತಿ ಘೋಷಿಸಿದ್ದಾರೆ. ವೈಟ್ಬಾಲ್ ಕ್ರಿಕೆಟ್ ಕಡೆಗೆ ಹೆಚ್ಚು ಗಮನ ನೀಡುವ ಉದ್ದೇಶದಿಂದ ರೆಡ್ ಬಾಲ್ ಕ್ರಿಕೆಟ್ಗೆ ವಿದಾಯ ಹೇಳುತ್ತಿರುವುದಾಗಿ 32 ವರ್ಷದ ಅನುಭವಿ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಹೇಳಿಕೊಂಡಿದ್ದಾರೆ.
2019ರಿಂದ 2023ರವರೆಗೆ ದಕ್ಷಿಣ ಆಫ್ರಿಕಾ ತಂಡದ ಪರ ಹೆನ್ರಿಚ್ ಕ್ಲಾಸೆನ್ ಕೇವಲ 4 ಟೆಸ್ಟ್ ಪಂದ್ಯಗಳನ್ನು ಮಾತ್ರವೇ ಆಡಿದ್ದಾರೆ. ವೆಸ್ಟ್ ಇಂಡೀಸ್ ಎದುರು ತಮ್ಮ ಕಟ್ಟ ಕಡೆಯ ಟೆಸ್ಟ್ ಆಡಿರುವ ಹೆನ್ರಿಚ್ ಕ್ಲಾಸೆನ್ ವೈಟ್ ಬಾಲ್ ಕ್ರಿಕೆಟ್ ಕಡೆಗೆ ಗಮನ ನೀಡಿದ್ದಾರೆ. ಇತ್ತೀಚೆಗೆ ನಡೆದ ಭಾರತ ವಿರುದ್ಧದ 2 ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿ ಬಳಿಕ ಮಾಜಿ ನಾಯಕ ಡೀನ್ ಎಲ್ಗರ್ ನಿವೃತ್ತಿ ತೆಗೆದುಕೊಂಡಿದ್ದರು. ಇದರ ಬೆನ್ನಲ್ಲೇ ಕ್ಲಾಸೆನ್ ನಿವೃತ್ತಿ ಘೋಷಿಸಿದ್ದಾರೆ.
ದಕ್ಷಿಣ ಆಫ್ರಿಕಾ ತಂಡ 2024ರಲ್ಲಿ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ಎದುರು ಟೆಸ್ಟ್ ಸರಣಿಯನ್ನು ಆಡಲಿದ್ದು, ಈ ಸರಣಿಗಳಿಗೆ ಹೆನ್ರಿಚ್ ಕ್ಲಾಸೆನ್ ಅವರನ್ನು ಪರಿಗಣಿಸುವುದಾಗಿ ದಕ್ಷಿಣ ಆಫ್ರಿಕಾ ತಂಡದ ಮುಖ್ಯ ಕೋಚ್ ಹೇಳಿಕೊಂಡಿದ್ದರು. ಆದರೆ, ಇದಕ್ಕೂ ಮೊದಲೇ ಹೆನ್ರಿಚ್ ಕ್ಲಾಸೆನ್ ನಿವೃತ್ತಿ ತೆಗೆದುಕೊಂಡಿದ್ದಾರೆ.