ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಹೌದು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 4 ಪ್ರಾಜೆಕ್ಟ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಆನ್ಲೈನ್ ಮೂಲಕ ಅಪ್ಲೈ ಮಾಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೋಷಿಯಲ್ ವರ್ಕ್/ ಸೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಹುದ್ದೆಯ ಮಾಹಿತಿ:
ಪ್ರಾಜೆಕ್ಟ್ ಆಫೀಸರ್ – ಚೈಲ್ಡ್ ಪ್ರೊಟೆಕ್ಷನ್ ಥೀಮ್- 2
ಪ್ರಾಜೆಕ್ಟ್ ಆಫೀಸರ್ – ಮೆಂಟಲ್ ಹೆಲ್ತ್ ಥೀಮ್- 2
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 90,000
ಅರ್ಜಿ ಸಲ್ಲಿಸಲು ಕ್ರಮಗಳು
- ಮೊದಲನೆಯದಾಗಿ ನಿಮ್ಹಾನ್ಸ್ ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ಮೇಲಿನ ಲಿಂಕ್ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
- ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ