ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ ದೇಶದ ಗಣ್ಯರಿಗೆ ಶ್ರೀ ರಾಮತೀರ್ಥ ಟ್ರಸ್ಟ್ ಆಹ್ವಾನ ನೀಡುತ್ತಿದೆ. ಈ ಮಧ್ಯೆ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರಿಗೆ ಆಹ್ವಾನ ನೀಡಿದರು.
ಜನವರಿ 22 ರಂದು, ಅಯೋಧ್ಯೆಯಲ್ಲಿ (Ayodhya) ಹೊಸದಾಗಿ ನಿರ್ಮಿಸಲಾದ ಭವ್ಯವಾದ ಶ್ರೀರಾಮ ಮಂದಿರದಲ್ಲಿ (Ram mandir) ಭಗವಾನ್ ರಾಮಲಲ್ಲಾನ ಪ್ರತಿಷ್ಠಾಪನೆ ಆಗಲಿದೆ. ಈ ಉತ್ಸವದಲ್ಲಿ ಭಾಗವಹಿಸಲು ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರಿಗೆ ಆಹ್ವಾನ ನೀಡಿದರು.
ಜನವರಿ 22 ರಂದು ನಡೆಯುವ ಐತಿಹಾಸಿಕ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳಿಗೆ ಆಹ್ವಾನ ನೀಡಿದರು.