ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಚಿತ್ರವು ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಪಡೆಯುವಲ್ಲಿ ಯಶಸ್ವಿಯಾಗಿದ್ದು, ವೀಕ್ಷಕರಿಂದ ಹಾಗೂ ಸೆಲೆಬ್ರಿಟಿಗಳಿಂದ ಉತ್ತಮ ಪ್ರತಿಕ್ರಿಯೆಗಳನ್ನು ಪಡದುಕೊಳ್ಳುವಲ್ಲಿ ಚಿತ್ರ ಮುಂಚೂಣಿಯಲ್ಲಿದೆ.
ಶತಕೋಟಿ ಗಳಸಿದ ಖುಷಿಗೆ ಚಿತ್ರತಂಡ ಇತ್ತೀಚಿಗೆ ಸೆಲೆಬ್ರಿಟಿಗಳಿಗಾಗಿ ಪಾರ್ಟಿ ಆಯೋಜಿಸಿ ಸಂಭ್ರಮಿಸಿತ್ತು. ಇದರ ಬೆನ್ನಲ್ಲೇ ನಟ ದರ್ಶನ್ ಕಾರ್ಯಕ್ರಮದ ನಿಮಿತ್ತ ದುಬೈಗೆ ತೆರಳಿದ್ದರು. ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಅವರು ಕಾಟೇರ ಸಕ್ಸಸ್ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ. ಕಾಲಾಯ ತಸ್ಮಯ್ ನಮಃ ಎಂದು ಟ್ವೀಟ್ ಮಾಡುವ ಮೂಲಕ ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದಾರೆ.