ಬೆಂಗಳೂರು:- ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ಗೆ ಕೊರೋನಾ ಪಾಸಿಟಿವ್ ಬಂದಿದ್ದು, ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.
ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕೊವಿಡ್ ಪಾಸಿಟಿವ್ ದೃಢಪಟ್ಟಿರುವುದರಿಂದ ಥಾವರ್ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಕ್ವಾರಂಟೈನ್ ಆಗಿದ್ದಾರೆ. ಹೀಗಾಗಿ ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮ ರದ್ದು ಮಾಡಲಾಗಿದೆ ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.