ಆನೇಕಲ್:- ಹಿಟ್ ಅಂಡ್ ರನ್ ಗೆ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಆನೇಕಲ್ ತಾಲ್ಲೂಕಿನ ತೆಲಗರಹಳ್ಳಿ ಬಳಿ ಜರುಗಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ತೆಲಗರಹಳ್ಳಿಯಲ್ಲಿ ಪಲ್ಸರ್ ಬೈಕ್ ನಲ್ಲಿ ತೆರಳುತ್ತಿದ್ದ ಬೈಕ್ ಸವಾರರಿಗೆ ಅಪರಿಚಿತ ವಾಹನ ಡಿಕ್ಕಿಯೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಬೈಕ್ ಸವಾರರು ಪ್ರಾಣ ಬಿಟ್ಟಿದ್ದಾರೆ.
ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.