ಧಾರವಾಡ:- ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದರೂ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಜೊತೆಗೆ ಕಾಂಗ್ರೆಸ್ ಸೇರ್ಪಡೆ ಕುರಿತು ನಾನು ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಸ್ಪಷ್ಟಪಡಿಸಿದರು.
ವೈ-1 ಧಾರವಾಡದಲ್ಲಿ ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನಾಗಿಯೇ ಯಾರನ್ನೂ ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಎಂದು ಕರೆಯುತ್ತಿಲ್ಲ. ಪ್ರೇರಣೆಯಿಂದ ಅನೇಕರು ಬಂದಿದ್ದಾರೆ. ಹಾಗೆಯೇ ಅನೇಕರು ಬರುತ್ತಾರೆ. ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಟಿಕೆಟ್ ನೀಡುವ ಕುರಿತು ಸಹ ಚರ್ಚೆ ನಡೆದಿಲ್ಲ. ಇನ್ನೂ ಧಾರವಾಡದ ನೌಕರರ ಭವನದಲ್ಲಿ ಲೋಕಸಭೆ ಚುನಾವಣೆ ತಯಾರಿ ಸಭೆ ಜರುಗಿದ್ದು, ಜನವರಿ 10ರಂದು ಬೆಂಗಳೂರಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿ ಸೇರಿ ಇತರರು ಸಭೆ ನಡೆಸಿ ಸಮಗ್ರ ಚರ್ಚೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿಗಳು, ಅಭ್ಯರ್ಥಿಗಳ ಬಗ್ಗೆ ಬೆಂಗಳೂರು ಸಭೆಯಲ್ಲಿ ಸಮಗ್ರ ಚರ್ಚೆ ಆಗಲಿದೆ ಎಂದು ತಿಳಿಸಿದರು.