ಚಿಕ್ಕಮಗಳೂರು :- ಜಿಲ್ಲೆಯ ಮೂಡಿಗೆರೆಯಲ್ಲಿ ಹಿಂದು ಯುವತಿಯೊಂದಿಗಿದ್ದ ಮುಸ್ಲಿಂ ಯುವಕ ಮತ್ತು ಅತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿರುವ ಘಟನೆ ಜರುಗಿದೆ.
ಯುವತಿಗೆ ಚಾಕೋಲೆಟ್ ನೀಡಿ ಪ್ರೀತಿ ನಿವೇದನೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಯುವಕನ ಮೇಲೆ ನೈತಿಕ ಪೊಲೀಸ್ಗಿರಿ ನಡೆದಿದೆ.
ಮೂಡಿಗೆರೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಯುವತಿಗೆ ಲವ್ ಪ್ರಪೋಸ್ ಮಾಡುತ್ತಿದ್ದಾಗ ಯುವಕನಿಗೆ ಹಿಗ್ಗಾಮುಗ್ಗ ಥಳಿಸಲಾಗಿದೆ. ಹಲ್ಲೆ ನಡೆಸಿದವರು ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡವರು ಎನ್ನಲಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.