ಚಿತ್ರದುರ್ಗ:- ಸೂಟ್ಕೇಸ್ನಲ್ಲಿ ಮಗುವಿನ ಶವ ಸಾಗಾಟ ಕೇಸ್ ಗೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯಲ್ಲಿ ಹತ್ಯೆಯ ಭೀಕರತೆ ಬಯಲಾಗಿದೆ.
ಪತಿ ವೆಂಕಟರಮಣ ತನ್ನ ನಾಲ್ಕು ವರ್ಷದ ಮಗನನ್ನು ಭೇಟಿಯಾಗಬಾರದು ಎಂದು ಮಗನನ್ನೇ ಹತ್ಯೆ ಮಾಡಿ ಶವವನ್ನು ಸೂಟ್ಕೇಸ್ನಲ್ಲಿ ಗೋವಾದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದಾಗ ಆರೋಪಿ ಮಹಿಳೆ ಸುಚನಾ ಸೇಠ್ ಚಿತ್ರದುರ್ಗದಲ್ಲಿ ಸಿಕ್ಕಿಬಿದ್ದಿದ್ದಳು.
ಹಿರಿಯೂರು ತಾಲೂಕು ಆಸ್ಪತ್ರೆ ಶವಾಗಾರದಲ್ಲಿ ವೈದ್ಯಾಧಿಕಾರಿ ಡಾ.ಕುಮಾರ ನಾಯ್ಕ್, ಡಾ.ರಂಗೇಗೌಡ ಅವರು ಮೃತ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಕುಮಾರ ನಾಯ್ಕ್, 36 ಗಂಟೆಗಳ ಹಿಂದೆಯೇ ಮಗುವಿನ ಹತ್ಯೆಯಾಗಿದೆ. ಕೈಯಿಂದ ಕತ್ತು ಹಿಸುಕಿ ಹತ್ಯೆ ಮಾಡಿಲ್ಲ. ತಲೆ ದಿಂಬು ಅಥವಾ ಬೇರೆ ವಸ್ತು ಬಳಸಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಉಸಿರುಗಟ್ಟಿಸಿದ ಕಾರಣ ಮಗುವಿನ ಮುಖ, ಎದೆಭಾಗ ಊದಿಕೊಂಡಿದೆ. ಹೀಗಾಗಿ ಮಗುವಿನ ಮೂಗಿನಿಂದ ರಕ್ತಸ್ರಾವವಾಗಿದೆ ಎಂದರು.
.