ಗಾಂಧಿನಗರ: ದೇಶದ ಪ್ರಮುಖ ಜವಳಿ ಕೇಂದ್ರವಾಗಿರುವ ಗುಜರಾತ್ನ (Gujarat) ಸೂರತ್ (Surat) ನಗರದಲ್ಲಿ ಅಯೋಧ್ಯೆಯಲ್ಲಿ (Ayodhya) ನೆಲೆಸಿರುವ ಸೀತಾಮಾತೆಗೆ (Sita Mata) ಅರ್ಪಿಸಲು ವಿಶೇಷ ಸೀರೆಯೊಂದು (Saree) ಸಿದ್ಧವಾಗಿದೆ. ಈ ಸೀರೆಯನ್ನು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ (Ram Mandir) ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ ಕಳುಹಿಸಲಾಗುವುದು ಎಂದು ಜವಳಿ ಉದ್ಯಮಿ ಲಲಿತ್ ಶರ್ಮಾ (Lalith Sharma)ತಿಳಿಸಿದ್ದಾರೆ.
ಸೀರೆಯ ವಿಶೇಷತೆಯೇನು?
ಸೀತಾಮಾತೆಗೆಂದು ತಯಾರಿಸಿರುವ ಈ ಸೀರೆಯಲ್ಲಿ ಭಗವಾನ್ ರಾಮನ ಚಿತ್ರಗಳು ಮತ್ತು ಅಯೋಧ್ಯೆಯ ದೇವಾಲಯದ ಮುದ್ರಣವಿದೆ. ಸೀರೆ ತಯಾರಿಯ ಮೊದಲ ಕಚ್ಚಾ ವಸ್ತುವಿನ ತುಣುಕನ್ನು ಸೂರತ್ನ ಸೀತಾ ದೇವಿಯ ದೇವಾಲಯಕ್ಕೆ ಅರ್ಪಿಸಲಾಗಿದೆ
ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಭೌತಿಕವಾಗಿ ಇರಲು ಸಾಧ್ಯವಾಗದ ಭಕ್ತರು ತಮ್ಮದೇ ಆದ ರೀತಿಯಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ಸಂಪರ್ಕ ಸಾಧಿಸಲು ಬಯಸಿದ ಕಾರಣ ಈ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಲಲಿತ್ ಶರ್ಮ ಹೇಳಿದ್ದಾರೆ
ನಾವು ಭಗವಾನ್ ರಾಮನ ಚಿತ್ರಗಳು ಮತ್ತು ಅಯೋಧ್ಯೆ ದೇವಸ್ಥಾನವನ್ನು ಮುದ್ರಿಸಿದ ವಿಶೇಷ ಸೀರೆಯನ್ನು ಸಿದ್ಧಪಡಿಸಿದ್ದೇವೆ. ನಾವು ಅದನ್ನು ಇಲ್ಲಿ ನೆಲೆಸಿರುವ ಸೀತಾಮಾತೆಯ ದೇವಸ್ಥಾನದಲ್ಲಿ ಅರ್ಪಿಸಿದ್ದೇವೆ. ಬಳಿಕ ಈ ಸೀರೆಯನ್ನು ಅಯೋಧ್ಯೆಯ ರಾಮಮಂದಿರಕ್ಕೆ ಕಳುಹಿಸುತ್ತೇವೆ. ಬೇಡಿಕೆ ಬಂದರೆ ಸೀತಾಮಾತೆ ನೆಲೆಸಿರುವ ಎಲ್ಲಾ ರಾಮನ ದೇವಾಲಯಗಳಿಗೆ ನಾವು ಅದನ್ನು ಉಚಿತವಾಗಿ ಕಳುಹಿಸುತ್ತೇವೆ ಎಂದು ಶರ್ಮಾ ತಿಳಿಸಿದ್ದಾರೆ.