ಬೆಂಗಳೂರು: ಏಪ್ರಿಲ್ 20, 21 ಹಾಗೂ 22ಕ್ಕೆ ನಿಗದಿಯಾಗಿದ್ದ ಸಿಇಟಿ ಪರೀಕ್ಷಾ (CET Exam) ದಿನಾಂಕವನ್ನು ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬದಲಾವಣೆ ಮಾಡಿದೆ.
ಏಪ್ರಿಲ್ 20ರಿಂದ 22ರ ವರೆಗೆ ನಡೆಯಬೇಕಾಗಿದ್ದ ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18, 19 ಹಾಗೂ 20ಕ್ಕೆ ನಿಗದಿ ಮಾಡಲಾಗಿದೆ. ಏಪ್ರಿಲ್ 21ರಂದು ಎನ್ಡಿಎ (National Defence Academy) ಪರೀಕ್ಷೆ ಇರುವ ಹಿನ್ನೆಲೆ ಸಿಇಟಿ ಪರೀಕ್ಷಾ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ 2024-25ರಲ್ಲಿ ಪ್ರವೇಶಾತಿ ಬಯಸುವವರಿಗಾಗಿ ಏಪ್ರಿಲ್ 20 ಮತ್ತು 21ರಂದು ಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಈ ಹಿಂದೆ ನಿಗದಿ ಮಾಡಲಾಗಿತ್ತು. ಅಲ್ಲದೇ ಆಸಕ್ತ ಅಭ್ಯರ್ಥಿಗಳು ಜನವರಿ 10ರಿಂದ ನಿಗದಿತ ಶುಲ್ಕದೊಂದಿಗೆ ಆನ್ಲೈನ್ ಅರ್ಜಿ ಸಲ್ಲಿಸಬಹುದು ಎಂದು ಕೆಇಎ ಕಾರ್ಯ ನಿರ್ವಾಹಕಿ ಎಸ್ ರಮ್ಯಾ ತಿಳಿಸಿದ್ದರು.