ಪುಷ್ಪ ಸಿನಿಮಾದ ‘ವೂಂ ಅಂಟಾವ ಮಾವ..’ ಹಾಡಿ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು. ಈ ಹಾಡೇ ಪಷ್ಪ ಸಿನಿಮಾಗೆ ಜನರನ್ನೂ ಕರೆತಂದಿದ್ದು. ಸೋಷಿಯಲ್ ಮೀಡಿಯಾದಲ್ಲಂತೂ ಕೋಟ್ಯಂತರ ಜನರು ರೀಲ್ಸ್ ಮಾಡಿದ್ದರು. ಈ ಹಾಡಿಗೆ ಸಮಂತಾ (Samantha) ಸಖತ್ತಾಗಿಯೇ ಸೊಂಟ ಬಳುಕಿಸಿದ್ದರು. ಈ ಯಶಸ್ಸನ್ನು ಮತ್ತೊಂದು ಬಾರಿ ಬಳಸಿಕೊಳ್ಳಲು ನಿರ್ದೇಶಕರು ಪ್ಲ್ಯಾನ್ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಪುಷ್ಪ 2 (Pushpa 2, ) ಸಿನಿಮಾದಲ್ಲೂ ಐಟಂ ಸಾಂಗ್ (Item Song) ವೊಂದಿದ್ದು, ಅದಕ್ಕೆ ಸಮಂತಾ ಅವರೇ ಡ್ಯಾನ್ಸ್ ಮಾಡಲಿದ್ದಾರೆ ಎಂದು ಹಿಂದೆ ಸುದ್ದಿ ಆಗಿತ್ತು. ಆದರೆ, ಸಮಂತಾ ಬದಲು ಮತ್ತೋರ್ವ ನಟಿಯನ್ನು ಚಿತ್ರತಂಡ ಆಯ್ಕೆ ಮಾಡಿಕೊಂಡಿದೆಯಂತೆ.
ಸಮಂತಾ ಅವರೇ ಡಾನ್ಸ್ ಮಾಡಲಿದ್ದಾರೆ ಎನ್ನುವ ಸುದ್ದಿ ಭಾರೀ ಸದ್ದು ಮಾಡಿದ್ದರೂ, ಇದೀಗ ಬಾಲಿವುಡ್ ನಟಿ ದಿಶಾ ಪಠಾನಿ (Disha Pathani) ಹೆಸರು ಕೇಳಿ ಬಂದಿದೆ. ಸಮಂತಾ ಅವರ ಅನಾರೋಗ್ಯದ ಕಾರಣದಿಂದಾಗಿ ಈ ನಿರ್ಧಾರ ತಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅಧಿಕೃತವಾಗಿ ಚಿತ್ರತಂಡ ಈ ಕುರಿತು ಹೇಳಿಕೊಳ್ಳಬೇಕಿದೆ.
ನಿರ್ದೇಶಕ ಸುಕುಮಾರ್- ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಮತ್ತೊಮ್ಮೆ ಬಾಕ್ಸಾಫೀಸ್ ಬ್ಯಾಂಗ್ ಮಾಡೋದಿಕ್ಕೆ ಭರ್ಜರಿಯಾಗಿ ಸಜ್ಜಾಗ್ತಿದ್ದಾರೆ. ಪುಷ್ಪ ಮೂಲಕ ದಕ್ಷಿಣ ಧ್ರುವದಿಂದ ಉತ್ತರ ಧ್ರುವದವರೆಗೂ ಧಮಾಕ ಎಬ್ಬಿಸಿದ್ದ ಈ ಜೋಡಿ ಸೀಕ್ವೆಲ್ ಮೂಲಕ ಬೆಳ್ಳಿತೆರೆಯಲ್ಲಿ ಕಮಾಲ್ ಮಾಡಲು ಹೊರಟಿದೆ. ಪುಷ್ಪ 2 (Pushpa 2) ಸಣ್ಣ ಟೀಸರ್ ಹಂಗಾಮ ಕ್ರಿಯೇಟ್ ಮಾಡಿದೆ. ಕಾಣೆಯಾಗಿದ್ದ ಪುಷ್ಪ ಹೊಸ ಅವತಾರದಲ್ಲಿ ಪ್ರತ್ಯಕ್ಷನಾಗುವ ಮೂಲಕ ಇನ್ಮುಂದೆ ನನ್ನಂದೇ ರೂಲ್ ಎಂಬ ಸಂದೇಶ ರವಾನಿಸಿದ್ದಾನೆ. ಪುಷ್ಪ ಸೀಕ್ವೆಲ್ ಎಂಟ್ರಿ ಯಾವಾಗ ಎನ್ನುತ್ತಿದ್ದ ಫ್ಯಾನ್ಸ್ಗೆ ಚಿತ್ರತಂಡ ಸರ್ಪ್ರೈಸ್ ನೀಡಿದೆ.
‘ಪುಷ್ಪ 2’ ದಿ ರೂಲ್ಸ್ ಶೂಟಿಂಗ್ ಭರದಿಂದ ಸಾಗ್ತಿದೆ. ಈ ನಡುವೆಯೇ ಸೀಕ್ವೆಲ್ ರೈಟ್ಸ್ ಭಾರೀ ಮೊತ್ತಕ್ಕೆ ಸೇಲ್ ಆಗಿರುವ ಖಬರ್ ಹೊರಬಿದ್ದಿದೆ. ಹಿಂದಿ ಬೆಲ್ಟ್ ನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಹಕ್ಕು ಮಾರಾಟವಾಗಿದೆಯಂತೆ. ಪುಷ್ಪ ಮೊದಲ ಭಾಗ ಬಾಲಿವುಡ್ ಅಂಗಳದಲ್ಲಿ ಬಡಾ ಹಿಟ್ ಕಂಡಿತ್ತು. ಅಲ್ಲು ಆಕ್ಟಿಂಗ್ , ಸುಕುಮಾರ್ ಟೇಕಿಂಗ್ ಗೆ ಹಿಂದಿ ಮಂದಿ ಫಿದಾ ಆಗಿದ್ದರು.