ಬೆಂಗಳೂರು: ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಗೆ ಜೈಲಿನಿಂದ ಬಿಡುಗಡೆಯ ಭಾಗ್ಯ ಸಿಗುವುದೇ ತುಂಬಾ ಕಷ್ಟ ಆಗಿ ಬಿಟ್ಟಿದೆ. ಒಂದು ಕಡೆ ಜಾಮೂನು ಮಂಜೂರಾಗಿ ಹೊರಬರುತ್ತಿದ್ದಂತೆ ಮತ್ತೊಂದು ಕಡೆ ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ . ನಾರಾಯಣಗೌಡ ಅವರಿಗೆಸಂಕಷ್ಟಗಳು ಎದುರಾಗುತ್ತಲೇ ಇವೆ.
ಜಾಮೀನು ಪಡೆದುಕೊಂಡು ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಎರಡು ಪ್ರಕರಣಗಳಲ್ಲಿ ನಾರಾಯಣಗೌಡ ಅವರು ಜಾಮೀನು ಪಡೆದುಕೊಂಡು ಜೈಲಿನಿಂದ ಹೊರಬರುತ್ತಿದ್ದಂತೆಯೇ ಇದೀಗ ಹಲಸೂರು ಗೇಟ್ ಠಾಣೆ ಪೊಲೀಸರು ನಾರಾಯಣಗೌಡನನ್ನು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ.
2020 ರಲ್ಲಿ ದಾಖಲಾಗಿದ್ದ ಪ್ರಕರಣ ಕೇಸ್ ಆಗಿದ್ದು ಕೊರೊನಾ ಅವಧಿಯಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದ ನಾರಾಯಣಗೌಡ ಹಾಗೆ ಕೊರೊನಾ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ NDMA ಅಡಿಯಲ್ಲಿ ಪ್ರಕರಣ ದಾಖಲಿಸಿದ್ದ ಪೊಲೀಸರು.