ಬೆಂಗಳೂರು:- ಮಹಿಳಾ ಸಬಲೀಕರಣಕ್ಕೆ ಗ್ಯಾರಂಟಿ ಪೂರಕವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ x ಮಾಡಿರುವ ಅವರು, ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು. ರಾಜ್ಯದ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ, ಉದ್ಯೋಗ ಖಾತ್ರಿಗೆ ತೊಂದರೆಯಾಗಿಲ್ಲ ಎಂದರು.
ಬರ ಪರಿಹಾರ ಬಿಡುಗಡೆ ವಿಳಂಬ ಖಂಡಿಸಿ ವಿಪಕ್ಷ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ಸಲ್ಲಿಸಿರುವ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ನಾವು ಸತ್ಯ ಹೇಳಿ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು ಎಂದಿದ್ದಾರೆ.
ನಾವು ಸತ್ಯ ಹೇಳಿ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು. ಗ್ಯಾರಂಟಿಗಳನ್ನು ಅಪಹಾಸ್ಯ, ಅವಹೇಳನ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎಂದು ಶುರು ಮಾಡಿದ್ದಾರೆ. ನಾವು ಜನರಿಗೆ ಸತ್ಯವನ್ನು ಹೇಳಬೇಕು. ಭಾರತದ ಇತಿಹಾಸದಲ್ಲಿ ಯಾವ ಸರ್ಕಾರವೂ ಈ ರೀತಿಯ ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ. ಇದರಿಂದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು, ಹಿಂದುಳಿದವರು, ಮಹಿಳೆಯರಿಗೆ ಅನುಕೂಲವಾಗಲಿದೆ. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದರು.