ಬೆಂಗಳೂರು :- ಹೆಚ್ಚುವರಿ ಡಿಸಿಎಂ ಹುದ್ದೆ ಊಹಾಪೋಹದ ಸುದ್ದಿ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ
ಈ ಸಂಬಂಧ ಮಾತನಾಡಿದ ಅವರು,ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿಚಾರವೆಲ್ಲ ಊಹಾಪೋಹದ ಸುದ್ದಿಯಾಗಿದೆ ಎಂದರು.
ನಮ್ಮ ಯೋಜನೆಗಳು ಎಲ್ಲ ಜನರನ್ನು ತಲುಪಬೇಕು ಮತ್ತು ಪ್ರತಿಯೊಂದು ಕ್ಷೇತ್ರಗಳಲ್ಲಿ ಆಸ್ಪತ್ರೆ, ರಸ್ತೆ, ಬಸ್ ನಿಲ್ದಾಣ ಸೇರಿದಂತೆ ಮೂಲಸೌಕರ್ಯಗಳಿಗೆ ಒತ್ತು ನೀಡುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು.
ಲೋಕಸಭೆ ಚುನಾವಣೆ ನಿಟ್ಟಿನಲ್ಲಿ ಕ್ರಿಯಾ ಯೋಜನೆ ಬಗ್ಗೆ ಚರ್ಚೆ ನಡೆದಿದೆ. ತಳ ಮಟ್ಟದಲ್ಲಿ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗುವುದು. ಕಾಂಗ್ರೆಸ್ ಗ್ಯಾರಂಟಿಯನ್ನು ಎಲ್ಲರಿಗೂ ತಲುಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಗ್ರ ರೂಪುರೇಷೆಯನ್ನು ಘೋಷಣೆ ಮಾಡಿದ್ದಾರೆ. ಎಲ್ಲರೂ ಅದಕ್ಕೆ ಅನುಮೋದನೆ ನೀಡಿದ್ದಾರೆ ಎಂದರು.