ಅಫ್ಘಾನಿಸ್ತಾನ ನಡುವಿನ ಟಿ-20 ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದು, ಕಾರಣಾಂತರಗಳಿಂದ ವಿರಾಟ್ ಕೊಹ್ಲಿ ತಂಡದಿಂದ ಅಲಭ್ಯರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಚಾರವನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ.
ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದು, ಕಾರಣಾಂತರಗಳಿಂದ ವಿರಾಟ್ ಕೊಹ್ಲಿ ತಂಡದಿಂದ ಅಲಭ್ಯರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಚಾರವನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಕೋಚ್ ರಾಹುಲ್ ದ್ರಾವಿಡ್ ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಆದರೆ, ಎರಡನೇ ಮತ್ತು ಮೂರನೇ ಟಿ20 ಪಂದ್ಯಗಳಿಗೆ ಲಭ್ಯರಾಗಲಿದ್ದಾರೆ. ವಾಸ್ತವವಾಗಿ ತಂಡದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಶುಭ್ಮನ್ ಗಿಲ್ ರೂಪದಲ್ಲಿ ಇಬ್ಬರು ಆರಂಭಿಕ ಆಟಗಾರರು ಇದ್ದಾರೆ. ಆದರೆ, ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಜೊತೆ ಯಶಸ್ವಿ ಓಪನಿಂಗ್ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.