ಹಾವೇರಿ:– ಜಿಲ್ಲೆಯ ರಾಣೇಬೆನ್ನೂರು ತಾಲೂಕಿನಲ್ಲಿ ಅರೇಮಲ್ಲಾಪುರ ಗ್ರಾಮದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹಿನ್ನೆಲೆ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಗ್ರಾಮಸ್ಥರಿಂದ ಹಿಗ್ಗಾಮುಗ್ಗ ಥಳಿಸಿರುವಂತಹ ಘಟನೆ ಜರುಗಿದೆ.
ಮಂಜುನಾಥನಿಗೆ ಎಂಬ ಆರೋಪಿಗೆ ಗ್ರಾಮದ ಮಹಿಳೆಯರು ಮತ್ತು ಪುರಷುರು ಗೂಸಾ ನೀಡಿದ್ದಾರೆ. ಪೋಕ್ಸೊ ಕಾಯ್ದೆ ಅಡಿ ಆರೋಪಿಯನ್ನ ಬಂಧಿಸಲು ಆಗ್ರಹಿಸಲಾಗಿದ್ದು, ಸ್ಥಳಕ್ಕೆ ರಾಣೇಬೆನ್ನೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.