ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನ ಮಂತ್ರಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಗ್ಯಾರಂಟಿ ಅನುಷ್ಠಾನಕ್ಕೆ ಸಮಿತಿ ರಚನೆ ಮಾಡಿ, 16 ಕೋಟಿ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದ್ದಾರೆ.
ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವಧನ ನೀಡುವ ವ್ಯವಸ್ಥೆ ಆಗಲಿದೆ. 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ. ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧ ಆವರಣದಲ್ಲಿ ಮಾಜಿ ಪ್ರಧಾನ ಮಂತ್ರಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.