ಎಸ್.ಆರ್.ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ‘BAD’ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಲಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಚಿತ್ರದ ಟ್ರೈಲರ್ (Trailer) ನಲ್ಲಿ ಏನೆಲ್ಲಾ ಇರಬಹುದು? ಎಂಬುದನ್ನು ತಿಳಿಸಲು ಚಿತ್ರತಂಡ ಪ್ರೋಮೊ ಬಿಡುಗಡೆ ಮಾಡಿದೆ.
ಈ ಪ್ರೋಮೊದಲ್ಲಿ ನಿರ್ದೇಶಕರಾದ ಪಿ.ಸಿ.ಶೇಖರ್ ಹಾಗೂ ನಾಯಕರಾದ ನಕುಲ್ ಗೌಡ ಸುಂದರವಾದ ನಿರೂಪಣೆಯಲ್ಲಿ ಚಿತ್ರದ ಟ್ರೈಲರ್ ನ ವೈಶಿಷ್ಟ್ಯತೆ ಹಾಗು ತಾಂತ್ರಿಕ ವಿಭಿನ್ನತೆಯ ಮಾಹಿತಿ ನೀಡಿದ್ದಾರೆ. ಈ ಪ್ರೋಮೊ ನೋಡಿದ ಮೇಲೆ ಚಿತ್ರದ ಬಗ್ಗೆ ಹಾಗೂ ಬಿಡುಗಡೆಯಾಗಲಿರುವ ಟ್ರೈಲರ್ ಬಗ್ಗೆ ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದೆ.