ಹುಕ್ಕೇರಿ:- ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಕ್ಕಳಿಗೆ ನೀಡುವ ಕ್ಷೀರ ಭಾಗ್ಯ ಹಾಲಿನಲ್ಲಿ ಹಲ್ಲಿ ಬಿದ್ದ ಪರಿಣಾಮ 80 ಮಕ್ಕಳ ಅಸ್ವಸ್ಥ ಅದರಲ್ಲಿ ನಾಲ್ಕು ಮಕ್ಕಳನ್ನು ಹುಕ್ಕೇರಿ ತಾಲೂಕ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲ ಮಾಡಲಾಗಿದೆ
ಇನ್ನುಳಿದ ವಿದ್ಯಾರ್ಥಿಗಳನ್ನು ಸಂಕೇಶ್ವರ್ ಪಟ್ಟಣದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ ಎಲ್ಲಾ ವಿದ್ಯಾರ್ಥಿಗಳು ಈಗ ಸ್ವಲ್ಪ ಚೇತರಿಸಿಕೊಂಡಿದ್ದಾರೆ.
ಇಂತಹ ಘಟನೆಗಳು ಮರುಕಳಿಸದಂತೆ ಶಿಕ್ಷಕರು ನೋಡಿಕೊಳ್ಳಬೇಕಾಗಿದೆ ಮಕ್ಕಳಿಗೆ ಉನ್ನತ ಗುಣಮಟ್ಟದ ಶಿಕ್ಷಣದ ಜೊತೆ ಆಹಾರ ಹಾಲು ಮೊಟ್ಟೆ ಇನ್ನಿತರೆ ನೀಡುತ್ತಿರುವ ಸರ್ಕಾರದ ಯೋಜನೆಗಳು ದುರುಪಯೋಗ ಆಗದಿರಲಿ ಎಂದು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.