ಹಾಸನ:- ಕಾರು ಚಾಲಕನ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಕರಣದ ಬಗ್ಗೆ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನಾನು ಅದಕ್ಕೆ ಪ್ರತಿಕ್ರಿಯೆ ಕೊಡಲು ಹೋಗಲ್ಲ ಎಂದು ಹೇಳಿದ್ದಾರೆ.
ಕೋರ್ಟ್ಗೆ ಕೇಸ್ ಹಾಕೊಂಡಿದ್ದೀನಿ ಅಂತ ಅವರೇ ಹೇಳಿದ್ದಾರೆ. ಕೋರ್ಟ್ಗೆ ಹಾಕಿಕೊಂಡ ಮೇಲೆ ಮಾಧ್ಯಮದ ಮುಂದೆ ಬರುವುದು ಏನಿದೆ. ಎಲೆಕ್ಷನ್ ಹತ್ತಿರ ಬರುತ್ತಿದೆ ಮಾತನಾಡುತ್ತಿದ್ದಾರೆ. ಎಂಟು, ಒಂಭತ್ತು ತಿಂಗಳ ಹಿಂದೆ ಆಗಿರುವುದು ಅಂತ ಅವರೇ ಹೇಳಿದ್ದಾರೆ. ಆಗ ನಡೆದಿದ್ದನ್ನು ಈಗ ಏಕೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಚರ್ಚೆ ಮಾಡಲು ಹೋಗಲ್ಲ. ಮಾಧ್ಯಮದ ಮುಂದೆ ಕುಳಿತುಕೊಂಡು ಒಬ್ಬರ ತೇಜೋವಧೆ ಮಾಡಬಾರದು ಎಂದು ಕಿಡಿಕಾರಿದ್ದಾರೆ.
ಇವರಿಗೆ ಕೋರ್ಟ್ ಮೇಲೆ ನಂಬಿಕೆ ಇಲ್ಲ ಅಂತ ಕಾಣುತ್ತೆ. ಅವರ ಅಜೆಂಡಾ ಏನಿದೆ ಅದು ಎಂಪಿ ಚುನಾವಣೆ. ಯಾರು, ಯಾರ ಮೇಲೂ ಹಲ್ಲೆ ಮಾಡಲ್ಲ, ಆಗಲ್ಲ. ಎ.ಟಿ.ರಾಮಸ್ವಾಮಿ ಅವರು ದೊಡ್ಡವರಿದ್ದಾರೆ, ಅವರು ಹಿರಿಯ ರಾಜಕಾರಣಿ. ಇಂತಹ ಹೋರಾಟಕ್ಕೆ ಬರುತ್ತಾರೆ ಅಂದರೆ ನಾನು ಏನು ಹೇಳಬೇಕು. ನಾನು ಅವರ ಬಗ್ಗೆ ಏನು ಚರ್ಚೆ ಮಾಡಲ್ಲ. ಅವರಿಗೆ ಮಾಹಿತಿ ಸರಿಯಾಗಿದ್ದರೆ ಹೋರಾಟ ಮಾಡಲಿ. ಇದರಲ್ಲಿ ಯಾರದ್ದು ತಪ್ಪು, ಯಾರದ್ದು ತಪ್ಪಿಲ್ಲ ಅಂತ ಇಡೀ ರಾಜ್ಯಕ್ಕೆ, ಇಡೀ ಜಿಲ್ಲೆಗೆ ಗೊತ್ತಿದೆ.
ಇದರ ಬಗ್ಗೆ ಮುಂದುವರೆದು ಏನು ಮಾತನಾಡಲು ಹೋಗಲ್ಲ. ನಾನು ಇದರ ಬಗ್ಗೆ ತಲೆ ಕೆಡಿಸಿಕೊಳ್ಳಲು ಹೋಗಲ್ಲ. ಅದೇ ವಿಚಾರ ನಾನು ಮಾತನಾಡಲ್ಲ. ಅದರ ಬಗ್ಗೆ ಮಾತನಾಡಿ ಎನ್ನುವ ಅಧಿಕಾರ ನಿಮಗಿಲ್ಲ. ನೀವು ನನಗೆ ಬಲವಂತ ಮಾಡುವ ಅಧಿಕಾರ ನಿಮಗಿಲ್ಲ. ನಾನು ಮಾತನಾಡಲ್ಲ ಎಂದು ಹೇಳಿದ್ದಾರೆ.