ಬೆಂಗಳೂರು: ಲೋಕಸಭೆಗೆ ಸ್ಪರ್ಧೆ ಮಾಡುವ ಬಗ್ಗೆ ಕಾರ್ಯಕರ್ತರು, ನಾಯಕರ ಬಳಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ರಾಜ್ಯಮಟ್ಟದ ನಾಯಕರು. ಕುಮಾರಸ್ವಾಮಿ ಅವರನ್ನು ಜನ ಪ್ರೀತಿ ಕೊಟ್ಟು ಬೆಳೆಸಿದ್ದಾರೆ.
ಹಲವಾರು ಕ್ಷೇತ್ರಗಳಲ್ಲಿ ಕುಮಾರಸ್ವಾಮಿ ನಿಲ್ಲಬೇಕು ಎಂಬ ಬೇಡಿಕೆ ಇದೆ.ಅದರಲ್ಲಿ ಮಂಡ್ಯ ಜಿಲ್ಲೆ ಕೂಡಾ ಒಂದು. ಸ್ಪರ್ಧೆ ಮಾಡುವ ವಿಚಾರವಾಗಿ ಪಕ್ಷದ ಕಾರ್ಯಕರ್ತರು, ನಾಯಕರು ಚರ್ಚೆ ಮಾಡುತ್ತೇವೆ. ಸೂಕ್ತ ಸಮಯದಲ್ಲಿ ಸೂಕ್ತವಾದ ನಿರ್ಧಾರ ತಿಳಿಸುತ್ತೇವೆ ಎಂದರು.
ಇನ್ನೂ ಮಂಡ್ಯದಲ್ಲಿ ಸುಮಲತಾ ಅವರೇ ಸ್ಪರ್ಧೆ ಮಾಡುತ್ತಾರೆ ಎಂಬ ಆಪ್ತರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆಪ್ತರ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ. ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲ ಕೊಟ್ಟಿರುವ ಬಗ್ಗೆ ಹಲವಾರು ಕಡೆ ಮಾತನಾಡಿದ್ದಾರೆ. ಲೋಕಸಭೆ ಚುನಾವಣೆ ವಿಚಾರವಾಗಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡುವ ಹೋಗುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.