ಹಾಸನ : ನಾನು ಈ ಜಿಲ್ಲೆಯಲ್ಲಿ ಬೇನಾಮಿ ಆಸ್ತಿಮಾಡಿದ್ದರೆ ಸರ್ಕಾರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಿ. ಯಾವುದೇ ರೀತಿಯ ತನಿಖೆಗೂ ನಾನು ಸಿದ್ದ ಎಂದು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಆರೋಪಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಗುಡುಗಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಸಾರ್ವಜನಿಕ ಜೀವನದಲ್ಲಿ ಇರೋ ವ್ಯಕ್ತಿಯಿಂದ ದಾಖಲೆ ಇಲ್ಲದೆ ಇಲ್ಲದೆ, ಪೂರ್ವಾಗ್ರಹ ಪೀಡಿತರಾಗಿ ಹೋರಾಟ ಮಾಡಿದ್ದಾರೆ ಎಂದು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ವಿರುದ್ದ ಕಿಡಿಕಾರಿದರು.
ಸತ್ಯವಿಲ್ಲದ ವಿಚಾರವನ್ನು ರಾಜಕೀಯಗೊಳಿಸುತ್ತಿರುವುದು ದುರದೃಷ್ಟಕರ. ಅನ್ಯಾಯಕ್ಕೆ ಒಳಗಾದ ಮಹಿಳೆ ಹೆಸರಿನಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೇಟ್ ಪಡೆಯೋ ಯತ್ನ ಮಾಡುತ್ತಿದ್ದಾರೆ. ಒಂದು ವರ್ಷದ ಹಿಂದಿನ ವಿಚಾರ ಇಟ್ಟು ಕೊಂಡು ಆರೋಪ ಮಾಡುವುದು ಸರಿಯಲ್ಲ. ಅಂತಹ ಆರೋಪ ಏನಾದ್ರು ಇದ್ದರೆ ಯಾವುದೇ ತನಿಖೆ ಬೇಕಿದ್ದರೆ ಮಾಡಲಿ ಎಂದು ಸವಾಲು ಹಾಕಿದರು.