ದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram mandir) ಜನವರಿ 22 ರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಮೊದಲು 11 ದಿನಗಳ ವ್ರತ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಕೇವಲ 11 ದಿನಗಳು ಉಳಿದಿವೆ. ಶುಭ ಸಮಾರಂಭಕ್ಕೆ ಸಾಕ್ಷಿಯಾಗುವ ಸೌಭಾಗ್ಯ ನನ್ನದು. ಸಮಾರಂಭದಲ್ಲಿ ಭಾರತದ ಜನರನ್ನು ಪ್ರತಿನಿಧಿಸಲು ಭಗವಂತ ನನ್ನನ್ನು ಕೇಳಿದ್ದಾನೆ. ಅದನ್ನು ಗಮನದಲ್ಲಿಟ್ಟುಕೊಂಡು ನಾನು ಇಂದಿನಿಂದ 11 ದಿನಗಳ ವಿಶೇಷ ಆಚರಣೆಯನ್ನು ಪ್ರಾರಂಭಿಸುತ್ತಿದ್ದೇನೆ. ಇದಕ್ಕಾಗಿ ನಾನು ನಿಮ್ಮೆಲ್ಲರ ಆಶೀರ್ವಾದವನ್ನು ಕೋರುತ್ತೇನೆ. ಈ ಕ್ಷಣದಲ್ಲಿ ನನ್ನ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸುವುದು ತುಂಬಾ ಕಷ್ಟ, ಆದರೆ ನಾನು ನನ್ನ ಕಡೆಯಿಂದ ಪ್ರಯತ್ನಿಸಿದ್ದೇನೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಡಿಯೋ ಸಂದೇಶದಲ್ಲಿ ಪ್ರಧಾನಿ ಹೇಳಿದ್ದಾರೆ.
ವ್ರತದ ಮಹತ್ವ ಏನು..?: ಹಿಂದೂ ಶಾಸ್ತ್ರಗಳ ಪ್ರಕಾರ, ದೇವರ ವಿಗ್ರಹದ ‘ಪ್ರಾಣ ಪ್ರತಿಷ್ಠೆ’ ಒಂದು ವಿವರವಾದ ಆಚರಣೆಯಾಗಿದೆ. ಇದಕ್ಕೂ ಮುನ್ನ ಸಾಕಷ್ಟು ನಿಯಮಗಳನ್ನು ಅನುರಿಸಬೇಕಾಗುತ್ತದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಹಲವು ಜವಾಬ್ದಾರಿಗಳ ನಡುವೆಯೂ ಎಲ್ಲಾ ಆಚರಣೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ನಿರ್ಧರಿಸಿದ್ದಾರೆ. ಅದರ ಫಲವಾಗಿ 11 ದಿನಗಳ ವ್ರತಕ್ಕೆ ಇಂದು ಕೈ ಹಾಕಿದ್ದಾರೆ.