ನಯನತಾರಾ (Nayanthara) ನಟನೆಯ ಅನ್ನಪೂರ್ಣಿ ಸಿನಿಮಾದಲ್ಲಿ ಶ್ರೀರಾಮನಿಗೆ ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಆಗುವಂತಹ ಸನ್ನಿವೇಶಗಳ ಇವೆ ಎನ್ನುವ ಕಾರಣಕ್ಕಾಗಿ ಹಲವಾರು ಜನರು ಆಕ್ರೋಶ ವ್ಯಕ್ತ ಪಡಿಸಿದ್ದರು. ಇದೀಗ ಚಿತ್ರದ ನಿರ್ದೇಶಕ, ನಿರ್ಮಾಪಕ ಹಾಗೂ ನಟಿ ನಯನತಾರಾ ಅವರ ಮೇಲೂ ಪ್ರಕರಣ ದಾಖಲಾಗಿದೆ. ಮಧ್ಯ ಪ್ರದೇಶದ ಜಬಲ್ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿವಾದ (Controversy) ಭುಗಿಲೇಳುತ್ತಿದ್ದಂತೆಯೇ ‘ಅನ್ನಪೂರ್ಣಿ’ (Annapurni) ಸಿನಿಮಾವನ್ನು ಕೊನೆಗೂ ನೆಟ್ ಫಿಕ್ಸ್ ತೆಗೆದು ಹಾಕಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬಂದಿದ್ದವು. ಅಲ್ಲದೇ, ಸಿನಿಮಾ ಬಗ್ಗೆ ದೂರು ಕೂಡ ದಾಖಲಾಗಿತ್ತು. ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎನ್ನುವ ಕಾರಣಕ್ಕಾಗಿ ಚಿತ್ರದ ವಿರುದ್ಧ ಪ್ರತಿಭಟನೆ ಕೂಡ ಮಾಡಲಾಗಿತ್ತು.
ನಾನಾ ಕಡೆಗಳಲ್ಲಿ ಅನ್ನಪೂರ್ಣಿ ಸಿನಿಮಾ ಬಗ್ಗೆ ದೂರುಗಳು ದಾಖಲಾಗುತ್ತಿದ್ದಂತೆಯೇ ಒಟಿಟಿಯಿಂದಲೇ ಚಿತ್ರವನ್ನು ತೆಗೆದು ಹಾಕಲಾಗಿದೆ. ಈ ಚಿತ್ರದಲ್ಲಿ ಶ್ರೀರಾಮನನ್ನು ಮಾಂಸಾಹಾರಿಯಾಗಿ ತೋರಿಸಲಾಗಿತ್ತು. ಇಂತಹ ವಿವಾದಿತ ದೃಶ್ಯಗಳನ್ನು ತೆಗೆದು ಹಾಕುವವರೆಗೂ ಅನ್ನಪೂರ್ಣಿ ಒಟಿಟಿಯಲ್ಲಿ ಸಿಗಲಾರದು.