ಶಿವಮೊಗ್ಗ:- ಶಿವಮೊಗ್ಗ ಫ್ರೀಡಂ ಪಾರ್ಕ್ಗೆ ಅಲ್ಲಮಪ್ರಭು ಹೆಸರು ಇಡುವುದಾಗಿ CM ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಲ್ಲಮ ಪ್ರಭು ಒಬ್ಬ ಶ್ರೇಷ್ಠ ಕವಿಯಾಗಿದ್ದು, ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ನಮ್ಮ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಆಶಯದಂತೆ ಶಿವಮೊಗ್ಗ ಫ್ರೀಡಂ ಪಾರ್ಕ್ಗೆ ಅಲ್ಲಮ ಪ್ರಭು (Allama Prabhu) ಅವರ ಹೆಸರನ್ನು ಇಡುವುದು ಸೂಕ್ತ ಎಂದು ನಾನೂ ಸಹ ಭಾವಿಸಿದ್ದೇನೆ.
ಹೀಗಾಗಿ ಫ್ರೀಡಂ ಪಾರ್ಕ್ಗೆ (Freedom Park) ಅಲ್ಲಮ ಪ್ರಭು (Allama Prabhu) ಎಂದು ನಾಮಕರಣ ಮಾಡಲು ನಾನು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಘೋಷಿಸಿದರು.
ಅಲ್ಲಮ ಪ್ರಭು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ಅವರ ಕೊಡುಗೆ ಅಸಾಮಾನ್ಯವಾಗಿದೆ. ಹೀಗಾಗಿ ಮಧು ಬಂಗಾರಪ್ಪ ಅವರು ಸೂಚಿಸಿದಂತೆ ಅವರ ಹೆಸರನ್ನು ಇಡುವುದು ಸೂಕ್ತ ಎಂದು ಭಾವಿಸಿದ್ದೇನೆ ಎಂದು ಹೇಳಿದರು.
ನಾನು ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಶಿವಮೊಗ್ಗ ನಗರದಲ್ಲಿ ಈ ಫ್ರೀಡಂ ಪಾರ್ಕ್ ಮಾಡಿದ್ದೆ. ಶಾಸಕರಾದ ಚೆನ್ನಬಸಪ್ಪನವರೇ, ಅಲ್ಲಮ ಪ್ರಭು ನಿಮ್ಮ ಜಿಲ್ಲೆಯವರು. ನಿಮ್ಮ ಊರಿನವರು ಕಣ್ರೀ, ಈಗ ನೀವೇ ಹೇಳಿ ಈ ಫ್ರೀಡಂ ಪಾರ್ಕ್ಗೆ ಯಾರ ಹೆಸರಿಡಬೇಕು? ನನಗಂತೂ ಮಧು ಬಂಗಾರಪ್ಪ ಅವರು ಹೇಳಿದಂತೆ ಅಲ್ಲಮ ಪ್ರಭು ಅವರ ಹೆಸರನ್ನು ಇಡುವುದು ಸೂಕ್ತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.