ಶಿವಮೊಗ್ಗ:- ನಾನು ಅಯೋಧ್ಯೆಗೆ ಹೋಗುತ್ತೇನೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಸಿದ್ದರಾಮಯ್ಯ, ನಾನು ಕೂಡ ಶ್ರೀರಾಮನ ಭಕ್ತ. ಆದರೆ, ಬಿಜೆಪಿಯವರು ಶ್ರೀರಾಮನ ಹೆಸರಿನಲ್ಲಿ ರಾಜಕೀಯ ಮಾಡಲು ಹೋಗುತ್ತಿದ್ದಾರೆ. ಅದರ ವಿರುದ್ಧ ನಮ್ಮ ಹೋರಾಟವೇ ಹೊರತು ಶ್ರೀರಾಮನ ವಿರೋಧ ಮಾಡುತ್ತಿಲ್ಲ. ನಾನು ಕೂಡ ಅಯೋಧ್ಯೆಗೆ ಹೋಗುತ್ತೇನೆ ಎಂದು ಸ್ಪಷ್ಟಪಡಿಸಿದರು.
ಅಯೋಧ್ಯೆ ರಾಮಜನ್ಮಭೂಮಿಯ (Ram Janmabhoomi) ರಾಮ ಮಂದಿರದಲ್ಲಿ (Ram Mandir) ಜನವರಿ 22ರಂದು ರಾಜ್ಯದಲ್ಲಿ ಸರ್ಕಾರ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ನಾನು ಸೂಚಿಸಿಲ್ಲ. ಬಿಜೆಪಿಯವರು ಅಯೋಧ್ಯೆಗೆ ಏಕೆ ಹೋಗುತ್ತಾರೆ? ಶ್ರೀರಾಮಚಂದ್ರ ಇಲ್ಲಿ ಇಲ್ಲವೇ? ನಮ್ಮಲ್ಲಿರುವ ಶ್ರೀರಾಮನಿಗೆ ಬೆಲೆ ಇಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ರಾಜ್ಯದಲ್ಲಿಯೂ ಪೂಜೆ ನಡೆಯಲಿದೆ ಎಂದು ಹೇಳಿದ್ದಾರೆ.